ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ ಅಡಿ ಬಡವರಿಗೆ ಉಚಿತವಾಗಿ ನೀಡುವ ಪಡಿತರ ವಿತರಣೆಯನ್ನು ಮತ್ತಷ್ಟು ತಿಂಗಳುಗಳ ಕಾಲ ಮುಂದುವರಿಸಲು ತೀರ್ಮಾನಿಸಲಾಗಿದೆ.
ದೇಶದಲ್ಲಿ ಮಹಾಮಾರಿ ಕೊರೊನಾ ವಕ್ಕರಿಸಿದ ಸಂದರ್ಭದಲ್ಲಿ ಮಾರ್ಚ್ 2020 ರಂದು ಪ್ರಧಾನ ಮಂತ್ರಿ ಗರೀಬ್ ಅನ್ನ ಕಲ್ಯಾಣ ಯೋಜನೆಯನ್ನು ಘೋಷಿಸಲಾಗಿದ್ದು, ಇದು ಈ ತಿಂಗಳ ಸೆಪ್ಟೆಂಬರ್ 30ಕ್ಕೆ ಅಂತ್ಯವಾಗುತ್ತಿತ್ತು. ಇದೀಗ ಈ ಯೋಜನೆಯನ್ನು ಮತ್ತೆ ಮೂರು ತಿಂಗಳುಗಳ ಕಾಲ ವಿಸ್ತರಿಸಲಾಗಿದೆ.
ಇದರಿಂದಾಗಿ ದೇಶದ ಕೋಟ್ಯಂತರ ಬಡ ಕುಟುಂಬಗಳು ಪ್ರಯೋಜನ ಪಡೆಯಲಿದ್ದು, ನರೇಂದ್ರ ಮೋದಿ ಸರ್ಕಾರದ ತೀರ್ಮಾನಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ ಅಡಿ ಬಡವರಿಗೆ ಉಚಿತ ಆಹಾರ ಧಾನ್ಯಗಳನ್ನು ಒದಗಿಸಲಾಗುತ್ತದೆ.