alex Certify ಹಬ್ಬಕ್ಕೂ ಮುನ್ನವೇ ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಬಂಪರ್‌ ಕೊಡುಗೆ; ಶೇ.34 ರಿಂದ ಶೇ.38 ಕ್ಕೆ ತುಟ್ಟಿಭತ್ಯೆ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಬ್ಬಕ್ಕೂ ಮುನ್ನವೇ ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಬಂಪರ್‌ ಕೊಡುಗೆ; ಶೇ.34 ರಿಂದ ಶೇ.38 ಕ್ಕೆ ತುಟ್ಟಿಭತ್ಯೆ ಹೆಚ್ಚಳ

ಕೇಂದ್ರ ಸರ್ಕಾರಿ ನೌಕರರಿಗೆ ಹಬ್ಬಕ್ಕೂ ಮುನ್ನವೇ ಭರ್ಜರಿ ಬಂಪರ್‌   ಕೊಡುಗೆ ಸಿಕ್ಕಿದೆ. ತುಟ್ಟಿಭತ್ಯೆಯನ್ನು ಶೇ.34 ರಿಂದ ಶೇ.38 ಕ್ಕೆ ಹೆಚ್ಚಳ ಮಾಡಲಾಗಿದ್ದು, ಇದರಿಂದಾಗಿ ಶೇ.4 ಹೆಚ್ಚಳವಾದಂತಾಗಿದೆ.

ಇದರ ಪ್ರಯೋಜನ 50 ಲಕ್ಷಕ್ಕೂ ಅಧಿಕ ಕೇಂದ್ರ ಸರ್ಕಾರಿ ನೌಕರರು ಹಾಗೂ 62 ಲಕ್ಷ ಪಿಂಚಣಿದಾರರಿಗೆ ಲಭ್ಯವಾಗಲಿದೆ.

ಕೇಂದ್ರ ಸರ್ಕಾರಿ ನೌಕರರಿಗೆ ವರ್ಷಕ್ಕೆ ಎರಡು ಬಾರಿ ಅಥವಾ ಆರು ತಿಂಗಳಿಗೊಮ್ಮೆ ಡಿಎ ಹೆಚ್ಚಳ ಮಾಡಲಾಗುತ್ತದೆ. ಆದರೆ ಕಳೆದ ಹಲವು ತಿಂಗಳುಗಳಿಂದಲೂ  ಈ ಹೆಚ್ಚಳ ಮಾಡಲಾಗಿರಲಿಲ್ಲ.

ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಡಿಎ ಹೆಚ್ಚಳ ಕುರಿತಂತೆ ತೀರ್ಮಾನ ಕೈಗೊಳ್ಳಲಾಗಿದ್ದು, ಇದರ ಜೊತೆಗೆ ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆಯನ್ನೂ ಸಹ ಮತ್ತೆ ಮೂರು ತಿಂಗಳ  ಕಾಲ ಮುಂದುವರೆಲಾಗಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...