
ಚಾಮರಾಜನಗರ: ನಾಳೆ ಗುಂಡ್ಲುಪೇಟೆಗೆ ಬಾರತ್ ಜೋಡೋ ಯಾತ್ರೆ ಆಗಮಿಸಲಿದೆ. ಕಿಡಿಗೇಡಿಗಳು ಭಾರತ್ ಜೋಡು ಯಾತ್ರೆಯ ಫ್ಲೆಕ್ಸ್ ಗಳನ್ನು ಹರಿದುಹಾಕಿದ್ದಾರೆ.
ಭಾರತ್ ಜೋಡೋ ಯಾತ್ರೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಸ್ವಾಗತ ಕೋರಿ ಫ್ಲೆಕ್ಸ್ ಗಳನ್ನು ಹಾಕಲಾಗಿತ್ತು. ಕಾಂಗ್ರೆಸ್ ಕಾರ್ಯಕರ್ತರು ಹಾಕಿದ್ದ ಫ್ಲೆಕ್ಸ್ ಗಳನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ.
ನಾಳೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಗೆ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಆಗಮಿಸಲಿದೆ. ರಾಜ್ಯದಲ್ಲಿ ಯಾತ್ರೆಯ ಯಶಸ್ಸಿಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದೇ ಸಂದರ್ಭದಲ್ಲಿ ಸ್ವಾಗತ ಕೋರಿ ಹಾಕಿದ್ದ ಫ್ಲೆಕ್ಸ್ ಗಳನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ.