ನಿರ್ಮಾಣ ಹಂತದ ಕಟ್ಟಡದಿಂದ ಮೂವರು ಕಾರ್ಮಿಕರು ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಹೊಸಕೆರೆಹಳ್ಳಿಯಲ್ಲಿ ನಡೆದಿದೆ.
ಈ ಕಾರ್ಮಿಕರು ಮೂರನೇ ಅಂತಸ್ತಿನಲ್ಲಿ ಸಿಮೆಂಟ್ ಪ್ಲಾಸ್ಟರಿಂಗ್ ಮಾಡುತ್ತಿದ್ದರು ಎನ್ನಲಾಗಿದ್ದು, ಆಯುತಪ್ಪಿ ಬಿದ್ದಿದ್ದಾರೆ. ಗಾಯಗೊಂಡಿರುವ ಇವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಯಾವುದೇ ಮುಂಜಾಗ್ರತಾ ಕ್ರಮ ವಹಿಸದೆ ಪ್ಲಾಸ್ಟರಿಂಗ್ ಕಾರ್ಯ ನಡೆಯುತ್ತಿತ್ತು ಎನ್ನಲಾಗಿದ್ದು, ಬೊಂಬು ಮುರಿದ ಪರಿಣಾಮ ಕೆಳಕ್ಕೆ ಬಿದ್ದಿದ್ದಾರೆ. ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.