ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಮ್ಮ ಹೆಸರನ್ನು ಶೋಭಾ ಗೌಡ ಎಂದು ಬದಲಾಯಿಸಿಕೊಳ್ಳಲಿದ್ದಾರೆ ಎಂಬ ವದಂತಿ ರಾಜ್ಯ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಪ್ರಸ್ತುತ ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿ ಒಕ್ಕಲಿಗ ಸಮುದಾಯದ ಡಿ.ಕೆ. ಶಿವಕುಮಾರ್ ಅವರಿದ್ದರೆ ಜೆಡಿಎಸ್ ನಲ್ಲಿ ಇದೆ ಸಮುದಾಯದ ಹೆಚ್.ಡಿ. ಕುಮಾರಸ್ವಾಮಿ ಪ್ರಭಾವಿ ನಾಯಕರಾಗಿದ್ದಾರೆ. ಹಳೆ ಮೈಸೂರು ಭಾಗದ ಮೇಲೆ ಕಣ್ಣಿಟ್ಟಿರುವ ಬಿಜೆಪಿಗೆ ಒಕ್ಕಲಿಗ ನಾಯಕತ್ವದ ಕೊರತೆ ಕಾಡುತ್ತಿದೆ.
ಹೀಗಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಅವಧಿ ಮುಕ್ತಾಯವಾಗಲಿರುವ ಕಾರಣ ಆ ಜಾಗಕ್ಕೆ ಒಕ್ಕಲಿಗ ಸಮುದಾಯದವರನ್ನು ತಂದು ಕೂರಿಸುವ ಇರಾದೆ ಬಿಜೆಪಿ ಕೇಂದ್ರ ನಾಯಕರದ್ದಾಗಿದೆ ಎಂದು ಹೇಳಲಾಗಿದೆ. ಹೀಗಾಗಿ ಸಿಟಿ ರವಿ ಅವರ ಹೆಸರು ಮುಂಚೂಣಿಯಲ್ಲಿದ್ದು, ಇದೇ ಸ್ಥಾನದ ಮೇಲೆ ಕಣ್ಣಿಟ್ಟಿರುವ ಶೋಭಾ ಕರಂದ್ಲಾಜೆ ತಮ್ಮ ಹೆಸರನ್ನು ಶೋಭ ಗೌಡ ಎಂದು ಬದಲಾಯಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಆದರೆ ಈ ವದಂತಿ ಎಷ್ಟರಮಟ್ಟಿಗೆ ನಿಜ ಎಂಬುದನ್ನು ಕಾದು ನೋಡಬೇಕಿದೆ.