‘ವಂದೇ ಭಾರತ್’ ಎಕ್ಸ್ ಪ್ರೆಸ್ ನ ಮೂರನೇ ರೈಲಿಗೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಗುಜರಾತಿನ ಗಾಂಧಿನಗರದಲ್ಲಿ ಚಾಲನೆ ನೀಡಿದ್ದಾರೆ.
ಮೇಕ್ ಇಂಡಿಯಾ ಅಭಿಯಾನದಡಿ ಈ ರೈಲು ನಿರ್ಮಾಣಗೊಂಡಿದ್ದು, ಗಂಟೆಗೆ ಗರಿಷ್ಠ 160 ಕಿಲೋಮೀಟರ್ ವರೆಗೆ ಸಂಚರಿಸಲಿದೆ. ಕೇವಲ 52 ಸೆಕೆಂಡುಗಳಲ್ಲಿ 100 kmph ವೇಗ ತಲುಪಲಿದೆ.
ಮಹಾರಾಷ್ಟ್ರದ ಮುಂಬೈ ಹಾಗೂ ಗುಜರಾತಿನ ಗಾಂಧಿನಗರ ನಡುವೆ ಈ ರೈಲು ಸಂಚರಿಸಲಿದ್ದು, ಮೇಕ್ ಇನ್ ಇಂಡಿಯಾ ಅಭಿಯಾನದಲ್ಲಿ ಒಟ್ಟು 75 ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳನ್ನು ನಿರ್ಮಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ.