alex Certify ‘ಸಾರಥಿ’ ಸಿನಿಮಾ ಬಿಡುಗಡೆಯಾಗಿ ಇಂದಿಗೆ 11 ವರ್ಷ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಸಾರಥಿ’ ಸಿನಿಮಾ ಬಿಡುಗಡೆಯಾಗಿ ಇಂದಿಗೆ 11 ವರ್ಷ

ದಿನಕರ್ ತೂಗುದೀಪ್ ನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಸೂಪರ್ ಡೂಪರ್ ಹಿಟ್ ‌ʼಸಾರಥಿʼ ಸಿನಿಮಾ ತೆರೆ ಮೇಲೆ ಬಂದು ಇಂದಿಗೆ 11ವರ್ಷಗಳಾಗಿವೆ. ಈ ಸಂಭ್ರಮವನ್ನು ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಸಂಭ್ರಮಿಸುತ್ತಿದ್ದಾರೆ.

2011 ಸೆಪ್ಟೆಂಬರ್ 30ರಂದು ಬಿಡುಗಡೆಯಾಗಿದ್ದ ಈ ಚಿತ್ರ ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸಿದ್ದಲ್ಲದೇ ಸುಮಾರು 250 ದಿನಗಳಿಗೂ ಹೆಚ್ಚು ಕಾಲ ಪ್ರದರ್ಶನ  ಕಾಣುವ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಹೊಸ ದಾಖಲೆ ಬರೆದಿತ್ತು.

ಶ್ರೀ ಅರಸೇಶ್ವರಿ ಸಿನಿ ಪ್ರೊಡಕ್ಷನ್ಸ್‌ ಬ್ಯಾನರ್ ನಡಿ ಸತ್ಯಪ್ರಕಾಶ್ ನಿರ್ಮಾಣ ಮಾಡಿದ್ದ ಈ ಚಿತ್ರದಲ್ಲಿ ದರ್ಶನ್ ಹಾಗೂ ದೀಪಾ ಸನ್ನಿಧಿ ಸೇರಿದಂತೆ ರಂಗಾಯಣ ರಘು, ಶರತ್ ಕುಮಾರ್, ಬುಲೆಟ್ ಪ್ರಕಾಶ್, ಶರತ್ ಲೋಹಿತಾಶ್ವ, ವಿಶ್ವ, ದಿಲೀಪ್, ಅಜಯ್, ಕೋಟೆ ಪ್ರಭಾಕರ್ ಮೊದಲಾದ ಕಲಾವಿದರು ತೆರೆ ಹಂಚಿಕೊಂಡಿದ್ದರು. ವಿ ಹರಿಕೃಷ್ಣ ಸಂಗೀತ ಸಂಯೋಜನೆಗೆ ಸಿನಿಪ್ರೇಕ್ಷಕರು ಫಿದಾ ಆಗಿದ್ದರು.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...