ಬೆಂಗಳೂರು: ಸಿಇಟಿ ಪರಿಷ್ಕೃತ ರ್ಯಾಂಕಿಂಗ್ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಾಳೆ ಪ್ರಕಟಿಸಲಿದೆ.
ಹೈಕೋರ್ಟ್ ಆದೇಶದಂತೆ ಪರಿಷ್ಕೃತ ರ್ಯಾಂಕಿಂಗ್ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ನಾಳೆ ಮಧ್ಯಾಹ್ನ 2 ಗಂಟೆಗೆ ಸಿಇಟಿ ಪರಿಷ್ಕೃತ ರ್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ ಮಾಹಿತಿ ನೀಡಿದ್ದಾರೆ.
ಇಂಜಿನಿಯರಿಂಗ್ ಕೋರ್ಸ್ ಗಳ ಪ್ರವೇಶಕ್ಕೆ ಪ್ರಸಕ್ತ ಸಾಲಿನ ಸಿಇಟಿ ಪರಿಷ್ಕೃತ RANKING ಪಟ್ಟಿ ಅಕ್ಟೋಬರ್ 1 ರಂದು ಪ್ರಕಟವಾಗಲಿದೆ. ಪಟ್ಟಿ ಪ್ರಕಟವಾದ ಬಳಿಕ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟಿಸಲಿದೆ. ಪರಿಷ್ಕೃತ ರ್ಯಾಂಕಿಂಗ್ ನಿಂದ ತಮ್ಮ ರ್ಯಾಂಕಿಂಗ್ ನಲ್ಲಿ ಏರುಪೇರು ಆಗುವ ಹಾಗೂ ಸೀಟು ಕೈತಪ್ಪುವ ಆತಂಕದಲ್ಲಿ ಸಾವಿರಾರು ವಿದ್ಯಾರ್ಥಿಗಳು ಇದ್ದಾರೆ ಎನ್ನಲಾಗಿದೆ.