ಬೆಂಗಳೂರು: ಬೆಂಗಳೂರು ಮಹಾನಗರದ ಪ್ರಮುಖ ರೈಲು ನಿಲ್ದಾಣಗಳಲ್ಲಿ ಜನಜಂಗುಳಿ ತಪ್ಪಿಸಲು ಅ. 1ರಿಂದ 31 ರವರೆಗೆ ಪ್ಲಾಟ್ ಫಾರ್ಮ್ ಟಿಕೆಟ್ ದರ 20 ರೂ ಗೆ ಹೆಚ್ಚಳ ಮಾಡಲಾಗಿದೆ.
ಪ್ರಸ್ತುತ ಪ್ಲಾಟ್ ಫಾರ್ಮ್ ಟಿಕೆಟ್ ದರ 10 ರೂಪಾಯಿ ಇದ್ದು, ಅ. 1 ರಿಂದ 1 ತಿಂಗಳ ಕಾಲ 20 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ.
ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ, ಕಂಟೋನ್ಮೆಂಟ್, ಯಶವಂತಪುರ, ಕೆಆರ್ ಪುರ ಹಾಗೂ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಪ್ಲಾಟ್ ಫಾರ್ಮ್ ಟಿಕೆಟ್ ದರವನ್ನು 20 ರೂ.ಗೆ ಹೆಚ್ಚಳ ಮಾಡಲಾಗಿದೆ.
ದಸರಾ ಹಬ್ಬ ಮತ್ತು ರಜೆ ದಿನಗಳಲ್ಲಿ ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರ ದಟ್ಟಣೆ ಇರುತ್ತದೆ. ಪ್ರಯಾಣಿಕರನ್ನು ಕಳುಹಿಸಲು ಬರುವವರ ಸಂಖ್ಯೆ ಹೆಚ್ಚಾಗಿರುತ್ತದೆ. ನಿಲ್ದಾಣದಲ್ಲಿ ಜನದಟ್ಟಣೆ ಹೆಚ್ಚಾಗಿ ಪ್ರಯಾಣಿಕರಿಗೆ ಪ್ಲಾಟ್ ಫಾರ್ಮ್ ಗಳಲ್ಲಿ ಓಡಾಟಕ್ಕೆ ತೊಂದರೆಯಾಗುತ್ತದೆ. ಹೀಗಾಗಿ ಪ್ರಯಾಣಿಕರ ಓಡಾಟಕ್ಕೆ ಮುಕ್ತ ಅವಕಾಶ ಕಲ್ಪಿಸಲು ಪ್ಲಾಟ್ ಫಾರ್ಮ್ ಟಿಕೆಟ್ ದರ ಹೆಚ್ಚಳ ಮಾಡಲಾಗಿದೆ ಎಂದು ಹೇಳಲಾಗಿದೆ.