ರಾಮನಗರ: ರಾಮನಗರ ಜಿಲ್ಲೆ ಚನ್ನಪಟ್ಟಣದ ರಾಂಪುರ ಗ್ರಾಮದಲ್ಲಿ ಸಚಿವ ಅಶ್ವತ್ಥನಾರಾಯಣ ಹಾಗೂ ಸಿ.ಪಿ.ಯೋಗೇಶ್ವರ್ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ.
ವಿವಿಧ ಕಾಮಗಾರಿಗೆ ಸಚಿವ ಅಶ್ವತ್ಥನಾರಾಯಣ ಚಾಲನೆ ನೀಡಲಿದ್ದು, ಆದರೆ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಆಹ್ವಾನಿಸದಿರುವುದು ಜೆಡಿಎಸ್ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದೆ.
ಮಾಜಿ ಸಿಎಂ ಕುಮಾರಸ್ವಾಮಿ ದೂರವಿಟ್ಟು ಕಾಮಗಾರಿಗೆ ಚಾಲನೆ ನೀಡುತ್ತಿರುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ಜೆಡಿಎಸ್ ಕಾರ್ಯಕರ್ತರು ಸಚಿವ ಅಶ್ವತ್ಥನಾರಾಯಣ ಹಾಗೂ ಯೋಗೇಶ್ವರ್ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ.
ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗುತ್ತಿದ್ದಂತೆ ಪೊಲೀಸರು ಜೆಡಿಎಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.