ರಾಮನಗರ: ತಮ್ಮ ಕಾರಿನ ಮೇಲೆ ಮೊಟ್ಟೆ, ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ.ಪಿ. ಯೋಗೇಶ್ವರ್, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾರ್ಯಕರ್ತರಿಂದ ಗಲಾಟೆ ಮಾಡಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ರಾಮನಗರದಲ್ಲಿ ಮಾತನಾಡಿದ ಸಿ.ಪಿ. ಯೋಗೇಶ್ವರ್, ಕುಮಾರಸ್ವಾಮಿಯವರು ಜೆಡಿಎಸ್ ಕಾರ್ಯಕರ್ತರ ಮೂಲಕ ದೊಂಬಿ ಎಬ್ಬಿಸುವ ಕೆಲಸ ಮಾಡಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಅವರ ಸರ್ಕಾರದ ಅವಧಿಯಲ್ಲಿ ಕೆಲಸ ಮಾಡಲು ಆಗಲ್ಲ ಎಂದು ಈ ಸರ್ಕಾರದಲ್ಲಿ ಕೆಲಸ ಮಾಡುತ್ತಿದ್ದೇನೆ. ಈಗ ಜೆಡಿಎಸ್ ಕಾರ್ಯಕರ್ತರನ್ನು ಬಿಟ್ಟು ಗಲಾಟೆ ಮಾಡಿಸುತ್ತಿದ್ದಾರೆ. ಕುಮಾರಸ್ವಾಮಿಯವರು ಚನ್ನಪಟ್ಟದಲ್ಲಿ ಅಭಿವೃದ್ಧಿ ಕೆಲಸಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.