ರಾಮನಗರ: ಚನ್ನಪಟ್ಟಣದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರು ನಡೆಸಿದ ಗಲಾಟೆ ವಿಚಾರ ಇದೀಗ ಸಿ.ಪಿ. ಯೋಗೇಶ್ವರ್ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ.
ಹೆಚ್.ಡಿ. ಕುಮಾರಸ್ವಾಮಿ ಓರ್ವ ಬ್ಲಾಕ್ ಮೇಲರ್, ಹೊರ ಜಿಲ್ಲೆಗಳಿಂದ ಜನರನ್ನು ತಂದು ದೊಂಬಿ ಎಬ್ಬಿಸಿ ಗಲಾಟೆ ಮಾಡಿಸಿದ್ದಾರೆ. ಈ ಮೂಲಕ ಗೂಂಡಾ ಸಂಸ್ಕೃತಿಗೆ ಮುನ್ನುಡಿ ಬರೆದಿದ್ದಾರೆ ಎಂದು ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ವಾಗ್ದಾಳಿ ನಡೆಸಿದ್ದಾರೆ.
ಕುಮಾರಸ್ವಾಮಿ ಅವಧಿ ಮುಗಿದಿದೆ. ಹಾಗಾಗಿ ಹತಾಶರಾಗಿದ್ದಾರೆ. ಈ ರೀತಿ ಕಾರ್ಯಕರ್ತರಿಂದ ಗಲಾಟೆ ನಡೆಸಿರುವುದು ಅವರ ಅಧಃಪತನ ಅನಿಸುತ್ತಿದೆ. ಜೆಡಿಎಸ್ ಮುಖಂಡರೇ ಪಕ್ಷ ತೊರೆಯುತ್ತಿದ್ದಾರೆ. ಇದರಿಂದ ಹೆಚ್ ಡಿ ಕೆ ಇನ್ನಷ್ಟು ಹತಾಶರಾಗಿದ್ದಾರೆ. ಅವರಿಗೆ ಮರ್ಮಾಘಾತವಾಗಿದೆ. ಚನ್ನಪಟ್ಟಣದ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯುಂಟು ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.