alex Certify BIG NEWS: ಅಧಿಕಾರ ಬರುತ್ತೆ, ಹೋಗುತ್ತೆ ಎಂದು ವೇದಾಂತ ಹೇಳುವವರು ‘ಆಪರೇಶನ್ ಕಮಲ’ ಎಂಬ ಪಾಪ ಎಸಗಿದ್ದೇಕೆ ? ‘ಅಡ್ಡಮಾರ್ಗʼ ಹಿಡಿದಿದ್ದು ಏಕೆ ? ಸಚಿವ ಅಶ್ವತ್ಥನಾರಾಯಣಗೆ HDK ಟಾಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಧಿಕಾರ ಬರುತ್ತೆ, ಹೋಗುತ್ತೆ ಎಂದು ವೇದಾಂತ ಹೇಳುವವರು ‘ಆಪರೇಶನ್ ಕಮಲ’ ಎಂಬ ಪಾಪ ಎಸಗಿದ್ದೇಕೆ ? ‘ಅಡ್ಡಮಾರ್ಗʼ ಹಿಡಿದಿದ್ದು ಏಕೆ ? ಸಚಿವ ಅಶ್ವತ್ಥನಾರಾಯಣಗೆ HDK ಟಾಂಗ್

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಚಿವ ಅಶ್ವತ್ಥನಾರಾಯಣ ನಡುವಿನ ವಾಕ್ಸಮರ ಮುಂದುವರೆದಿದ್ದು, ಅಭಿವೃದ್ಧಿ ತಡೆಯಲು ಕುಮಾರಸ್ವಾಮಿ ವಾಮಮಾರ್ಗ ಅನುಸರಿಸಿರುವುದು ಖಂಡನೀಯ ಎಂಬ ಸಚಿವರ ಹೇಳಿಕೆಗೆ ಕುಮಾರಸ್ವಾಮಿ ಖಡಕ್ ತಿರುಗೇಟು ನೀಡಿದ್ದಾರೆ.

ಅಭಿವೃದ್ಧಿ ಕೆಲಸ ಎಂದರೇನು ಅಶ್ವತ್ಥನಾರಾಯಣ ಅವರೇ ? ವಾಮಮಾರ್ಗ ಎಂದರೆ ಯಾವುದು? ಇವೆರಡರಲ್ಲೂ ತಮಗೆ ಒಳ್ಳೇ ಅನುಭವವೇ ಇದೆ. ಅಧಿಕಾರಿಗಳನ್ನು ಬುಟ್ಟಿಗೆ ಹಾಕಿಕೊಂಡು ʼಕಳ್ಳಮಾರ್ಗʼದಲ್ಲಿ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲು ಹೊರಟಿದ್ದು, ಕ್ಷೇತ್ರದ ಶಾಸಕರನ್ನೇ ಕತ್ತಲೆಯಲ್ಲಿ ಇಟ್ಟಿದ್ದನ್ನು ಏನೆಂದು ಕರೆಯಬೇಕು? ಇದೇನಾ ನೀವು ಹೇಳುವ ʼರಾಜಮಾರ್ಗʼ? ಎಂದು ಪ್ರಶ್ನಿಸಿದ್ದಾರೆ.

ಅಧಿಕಾರವೂ ತಪ್ಪಬಾರದು, ಅಭಿವೃದ್ಧಿಯೂ ಆಗಬಾರದು’ ಎಂದು ನಾನು ಭಾವಿಸಿದ್ದಿದ್ದರೆ ನೀವು ಮಲ್ಲೇಶ್ವರದಲ್ಲಿ ಶಾಸಕರೇ ಆಗುತ್ತಿರಲಿಲ್ಲ. ಆ ದಿನಗಳನ್ನು ಒಮ್ಮೆ ನೆನಪು ಮಾಡಿಕೊಳ್ಳಿ. ಇನ್ನು; ಅಭಿವೃದ್ಧಿ ಬಗ್ಗೆ ಉಪದೇಶ ಮಾಡಿದ್ದೀರಿ, ನಿಮ್ಮ ಮಾದರಿಯಲ್ಲಿ ಅಭಿವೃದ್ಧಿ ಮಾಡಿಕೊಳ್ಳುವುದು ನನಗೆ ಗೊತ್ತಿಲ್ಲ, ನನ್ನಿಂದ ಆಗುವುದೂ ಇಲ್ಲ.

ಅಧಿಕಾರ ಬರುತ್ತದೆ, ಹೋಗುತ್ತದೆ ಎಂದು ವೇದಾಂತ ಹೇಳಿದ್ದೀರಿ. ಹೌದು; ಇಂಥ ಉದಾತ್ತ, ಆದರ್ಶ ಚಿಂತನೆಯ, ವಿಶಾಲ ಹೃದಯ ವೈಶಾಲ್ಯವುಳ್ಳ ನಿಮ್ಮಂಥ ಪ್ರಾಜ್ಞರೇ ಆಪರೇಶನ್ ಕಮಲ ಎಂಬ ಪಾಪ ಎಸಗಿದ್ದೇಕೆ? ನಮ್ಮ ಶಾಸಕರ ಮನೆಯಲ್ಲಿ ಹಣ ಇಟ್ಟು ಬಂದ್ದಿದ್ದು ಯಾಕೆ? ಎಂದು ಪ್ರಶ್ನಿಸಿದ್ದಾರೆ.

ಅಧಿಕಾರ ಬೇಕಿದ್ದರೆ ನೀವು ಚುನಾವಣೆಯಲ್ಲಿ ಪೂರ್ಣ ಬಹುಮತ ಸಿಗುವವರೆಗೂ ಕಾಯಬಹುದಿತ್ತಲ್ಲವೇ? ಆದರೆ, ಹಪಾಹಪಿಯಿಂದ ʼಅಡ್ಡಮಾರ್ಗʼ ಹಿಡಿದಿದ್ದು ಏಕೆ? ಅಕ್ಕಪಕ್ಕದ ಪಕ್ಷಗಳ ಶಾಸಕರನ್ನು ಅಪಹರಿಸಿ ಆಪರೇಷನ್‌ ಕಮಲದ ಸರಕಾರ ಮಾಡಿದ್ದು ಯಾಕೆ? ಇದು ವಾಮಮಾರ್ಗವೋ? ಸನ್ಮಾರ್ಗವೋ? ಸ್ಪಲ್ಪ ಹೇಳಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಸರಕಾರ ಬಂದ ಮೇಲೆ ರಾಮನಗರ ಜಿಲ್ಲೆಯಲ್ಲಿ ಎಷ್ಟು ಅಭಿವೃದ್ಧಿ ಆಗಿದೆ ಎಂಬುದನ್ನು ಬಹಿರಂಗ ಚರ್ಚೆ ಮಾಡೋಣ ಬನ್ನಿ. ಆಗ ಯಾರ ಆತ್ಮಸಾಕ್ಷಿ ಏನು ಎಂಬುದು ಜನರಿಗೂ ತಿಳಿಯುತ್ತದೆ. ʼಎಂಎಲ್‌ಸಿ ಕೋರಿಕೆ ಮೇರೆಗೆ….ʼ ಎಂದು ಬಿಡುಗಡೆ ಮಾಡಿದ 50 ಕೋಟಿ ರೂ. ಒಳಗುಟ್ಟಿನ ಬಗ್ಗೆಯೂ ಚರ್ಚಿಸೋಣ ಬನ್ನಿ. ನಾನು ತಯಾರಿದ್ದೇನೆ ಎಂದು ಪಂಥಾಹ್ವಾನ ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...