ರಾಮನಗರ: ರಾಮನಗರದ ಚನ್ನಪಟ್ಟಣದಲ್ಲಿ ವಿವಿಧ ಕಾಮಗಾರಿಗೆ ಚಾಲನೆ ವೇಳೆ ನಡೆದಿದ್ದ ಜಟಾಪಟಿ ಪ್ರಕರಣ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ.
ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ವಕ್ತಾರ ಸೇರಿದಂತೆ 14 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ನಿನ್ನೆ ಚನ್ನಪಟ್ಟಣದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಲು ಆಗಮಿಸಿದ್ದ ಸಿ.ಪಿ. ಯೋಗೇಶ್ವರ್ ಕಾರಿನ ಮೇಲೆ ಜೆಡಿಎಸ್ ಕಾರ್ಯಕರ್ತರು ಕಲ್ಲು ತೂರಾಟ, ಮೊಟ್ಟೆ ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿಗಳು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಸಿ.ಪಿ.ಯೋಗೇಶ್ವರ್ ಕಾರು ಚಾಲಕ ವೆಂಕಟೇಶ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಜೆಡಿಎಸ್ ನ 14 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೇ ಪೊಲೀಸರಿಗೆ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಹಿನ್ನೆಲೆಯಲ್ಲಿಯೂ ಜೆಡಿಎಸ್ ಕಾರ್ಯಕರ್ತರ ವಿರುದ್ಧ ಕೇಸ್ ದಾಖಲಾಗಿದೆ.
ಜೆಡಿಎಸ್ ವಕ್ತಾರ ವಿ. ನರಸಿಹ ಮೂರ್ತಿ, ನವೀನ್, ಪ್ರದೀಪ್, ನಂದೀಶ್, ಬೋರೇಗೌಡ, ಮನು, ಬಿ.ಎನ್. ಮಹೇಶ್, ಮಾಜಿ ತಾಲೂಕು ಪಂಚಾಯ್ತಿ ಸದಸ್ಯ ಗುರುಕುಮಾರ್, ಶಿವು, ಅರಸೇಗೌಡ, ತಾಲೂಕು ವಿದ್ಯಾರ್ಥಿ ಘಟಕದ ಆಶಿಶ್, ಡಿ.ಕುಮಾರ್, ಲೋಕೇಶ್, ಪ್ರದೀಪ್ ಸೇರಿದಂತೆ 14 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.