ಬೆಂಗಳೂರು: ರಾಜ್ಯಸಭಾ ಚುನಾವಣೆ ವೇಳೆ ಅಡ್ಡಮತದಾನ ಮಾಡಿದ್ದ ಜೆಡಿಎಸ್ ನ ಇಬ್ಬರು ಶಾಸಕರಿಗೆ ನೋಟೀಸ್ ಜಾರಿ ಮಾಡಲಾಗಿದೆ.
ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಜೆಡಿಎಸ್ ನ ಇಬ್ಬರು ಶಾಸಕರಿಗೆ ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದಾರೆ. ಕೋಲಾರ ಶಾಸಕ ಶ್ರೀನಿವಾಸ್ ಗೌಡ ಹಾಗೂ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರಿಗೆ ನೋಟೀಸ್ ನೀಡಲಾಗಿದೆ.
ಇಬ್ಬರನ್ನು ಅನರ್ಹಗೊಳಿಸುವಂತೆ ದೂರು ಬಂದ ಹಿನ್ನೆಲೆಯಲ್ಲಿ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ನೋಟೀಸ್ ಜಾರಿಗೊಳಿಸಿದ್ದಾರೆ.