ಬೆಂಗಳೂರು: ಜೆಡಿಎಸ್ ಭದ್ರ ಕೋಟೆ ಎಂದೇ ಹೇಳಲಾಗುತ್ತಿದ್ದ ಹಳೇ ಮೈಸೂರು ಭಾಗದಲ್ಲಿ ಭಾರತ್ ಜೋಡೋ ಯಾತ್ರೆ ಮೂಲಕ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಸಂಚಲನ ಮೂಡಿಸುತ್ತಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗಾಂಧಿ ಕುಟುಂಬದ ಸದಸ್ಯರೆಲ್ಲರೂ ಬಂದರೂ ಯಾವ ಪರಿಣಾಮವೂ ಬೀರಲ್ಲ ಎಂದು ಟಾಂಗ್ ನೀಡಿದ್ದಾರೆ.
ಬೆಂಗಳೂರಿನ ಜೆ.ಪಿ.ಭವದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಮೈಸೂರು, ಹಳೇ ಮೈಸೂರು ಭಾಗದಲ್ಲಿ ಭಾರತ್ ಜೋಡೋ ಯಾತ್ರೆ ನಡೆಯುತ್ತಿದೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಆಗಮಿಸುತ್ತಿದ್ದಾರೆ. ಇದರಿಂದ ನಮ್ಮ ಪಕ್ಷದ ಮೇಲೆ ಯಾವುದೇ ಪರಿಣಾಮವೂ ಬೀರಲ್ಲ ಎಂದರು.
ಗಾಂಧಿ ಕುಟುಂಬದ ಸದಸ್ಯರೆಲ್ಲರೂ ಬಂದು ಭಾರತ್ ಜೋಡೋ ಯಾತ್ರೆ ಮಾಡಿದರೂ ಕರ್ನಾಟಕದಲ್ಲಿ ಯಾವುದೇ ಬದಲವಣೆ ತರಲು ಆಗಲ್ಲ. ಇವರೆಲ್ಲ ರಾಜ್ಯದ ಜನತೆಗೆ ಏನು ಸಂದೇಶ ನೀಡಲು ಹೊರಟಿದ್ದಾರೆ? ಮೊದಲು ಭಾರತ್ ಜೋಡೋ ಯಾತ್ರೆ ಮುಗಿಯಲಿ ನಂತರ ಜೆಡಿಎಸ್ ನ ಪಂಚರತ್ನ ಯಾತ್ರೆ ಏನು ಅಂತ ತೋರಿಸ್ತೀವಿ ಎಂದರು.
ವಿಧಾನಸಭಾ ಚುನಾವಣೆಗೆ ಪಂಚರತ್ನ ಯಾತ್ರೆ ವೇಳೆಯೇ ಕ್ಷೇತ್ರವಾರು ಜೆಡಿಎಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗುವುದು ಎಂದು ಹೇಳಿದರು.