ರಾಮನಗರ: ಚನ್ನಪಟ್ಟಣದಲ್ಲಿ ಬಿಜೆಪಿ ವರ್ಸಸ್ ಜೆಡಿಎಸ್ ಜಟಾಪಟಿ ಮುಂದುವರೆದಿದ್ದು, ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಲಾಗಿದೆ.
ರಾಮನಗರ ಜಿಲ್ಲೆ ಚನ್ನಪಟ್ಟಣದ ಬಸ್ ನಿಲ್ದಾಣದ ಬಳಿ ಗಲಾಟೆ ನಡೆದಿದ್ದು, ಬಿಜೆಪಿ ಕಾರ್ಯಕರ್ತ ಮತ್ತು ಮಾಹಿತಿ ಹಕ್ಕು ಕಾರ್ಯಕರ್ತ ಸಿದ್ದೇಗೌಡನ ಮೇಲೆ ಜೆಡಿಎಸ್ ಮುಖಂಡ ನಾಗರಾಜ್ ಹಾಗೂ ಬೆಂಬಲಿಗರು ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ.
ಗುತ್ತಿಗೆದಾರ ನಾಗರಾಜ್ ಕಾಮಗಾರಿಗೆ ಸಂಬಂಧಿಸಿದಂತೆ ಮಾಹಿತಿ ಹಕ್ಕು ಕಾಯ್ದೆಯಡಿ ಸಿದ್ಧೆಗೌಡ ಅರ್ಜಿ ಸಲ್ಲಿಸಿದ್ದು, ಇದೇ ವಿಚಾರವಾಗಿ ಗಲಾಟೆ ನಡೆದು ಹಲ್ಲೆ ನಡೆಸಲಾಗಿದೆ. ಗಾಯಗೊಂಡ ಸಿದ್ಧೇಗೌಡ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.