ಚಿಕ್ಕಬಳ್ಳಾಪುರ: ವಿಷ ಸೇವಿಸಿ ತಂದೆ, ತಾಯಿ ಹಾಗೂ ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದಲ್ಲಿ ನಡೆದಿದೆ.
ಪ್ರಿಯಕರನೊಂದಿಗೆ ಮಗಳು ಪರಾರಿಯಾದ ಹಿನ್ನೆಲೆಯಲ್ಲಿ ಮನನೊಂದು ವಿಷ ಸೇವಿಸಿ ತಂದೆ, ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶ್ರೀರಾಮಪ್ಪ(63), ಸರೋಜಮ್ಮ(60), ಮನೋಜ್(24) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಶಿಟ್ಲಘಟ್ಟ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.