ಧಾರವಾಡ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅನುಷ್ಠಾನ ಮಾಡಲಾಗುತ್ತಿರುವ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ ಪ್ರೋತ್ಸಾಹಧನ ಮಂಜೂರಾದ ವಿದ್ಯಾರ್ಥಿವೇತನ, ಪ್ರೋತ್ಸಾಹಧನ ಮೊತ್ತವನ್ನು ಡಿ.ಬಿ.ಟಿ ಪೋರ್ಟಲ್ ಮೂಲಕ ವಿದ್ಯಾರ್ಥಿಗಳ ಆಧಾರ್ ಜೋಡಿತ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತಿದೆ.
ಆಧಾರ್ ಜೋಡಣೆಯಾಗದೇ ಬಾಕಿ ಉಳಿದ ಅರ್ಜಿಗಳಿಗೆ ತ್ವರಿತಗತಿಯಲ್ಲಿ ಆಧಾರ ಸೀಡಿಂಗ್ಗಾಗಿ ಭಾರತ ಸರ್ಕಾರದ ಅಂಚೆ ಇಲಾಖೆಯ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಅಂಚೆ ಕಛೇರಿಗಳಲ್ಲಿ ಇಂಡಿಯನ್ ಪೋಸ್ಟಲ್ ಪೇಮೆಂಟ್ ಬ್ಯಾಂಕ್(IPPB) ಖಾತೆಯನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ.
ಆದ್ದರಿಂದ ತಮ್ಮ ಹತ್ತಿರದ ಅಂಚೆ ಕಛೇರಿಯಲ್ಲಿ ಇಂಡಿಯನ್ ಪೋಸ್ಟಲ್ ಪೇಮೆಂಟ್ ಬ್ಯಾಂಕ್(IPPB) ಖಾತೆಯನ್ನು ತೆರೆದು, ಪ್ರೋತ್ಸಾಹಧನದ ಮಂಜೂರಾತಿಗಾಗಿ ಅಗತ್ಯ ದಾಖಲಾತಿಯನ್ನು ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಧಾರವಾಡ ಇಲ್ಲಿಗೆ ಸಲ್ಲಿಸಿ, ಆಧಾರ ಸೀಡಿಂಗ್ ಮಾಡಿಸಿಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.