ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ರೈತರು ಎತ್ತಿನ ಗಾಡಿಯೊಂದಿಗೆ ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆ ವೇಳೆ ಪೊಲೀಸರು ಮತ್ತು ರೈತರ ನಡುವೆ ವಾಗ್ವಾದ ನಡೆದಿದೆ. ಹೆದ್ದಾರಿಯಲ್ಲಿ ಗಾಡಿಗಳನ್ನು ನಿಲ್ಲಿಸದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಆದರೆ, ಪ್ರತಿಭಟನಾನಿರತ ರೈತರು ಇದಕ್ಕೆ ಒಪ್ಪಿಲ್ಲ. ಕೊನೆಗೆ ಪೊಲೀಸರು ಪ್ರತಿಭಟನಾನಿರತ ರೈತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಡ್ಯದ ವಿಸಿ ಫಾರಂ ಗೇಟ್ ಬಳಿ ಪೊಲೀಸರು ರೈತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.