ಬೆಂಗಳೂರು: ಬಹುಭಾಷಾ ನಟಿ ಶ್ರೀಲೀಲಾ ತಾಯಿ ಸ್ವರ್ಣಲತಾ ವಿರುದ್ಧ ಮತ್ತೊಂದು ಎಫ್ ಐ ಆರ್ ದಾಖಲಾಗಿದೆ. ಸ್ವರ್ಣಲತಾ ವಿರುದ್ಧ ಅವರ ಪತಿಯೇ ದೂರು ದಾಖಲಿಸಿದ್ದಾರೆ.
ನನ್ನ ಮನೆಗೆ ಅಕ್ರಮವಾಗಿ ಪ್ರವೇಶ ಮಾಡಿದ್ದಲ್ಲದೇ, ಬೀಗ ಒಡೆದು ಮನೆಗೆ ನುಗ್ಗಿದ್ದಾರೆ ಎಂದು ಆರೋಪಿಸಿ ಸ್ವರ್ಣಲತಾ ವಿರುದ್ಧ ಪತಿ ಸುಭಾಕರ್ ರಾವ್ ಆಡುಗೋಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಬೆಂಗಳೂರಿನ ಕೋರಮಂಗಲದ ಪ್ರೆಸ್ಟೀಜ್ ಅಪಾರ್ಟ್ ಮೆಂಟ್ ನಲ್ಲಿರುವ ಸುಭಾಕರ್ ರಾವ್ ಅವರ ಫ್ಲ್ಯಾಟ್ ನ್ನು ಪತ್ನಿ ಸ್ವರಣಲತಾ ಅವರಿಗೆ ನೀಡಿದ್ದರು. ಆದರೆ ನಂತರದ ದಿನಗಳಲ್ಲಿ ಇಬ್ಬರ ನಡುವೆ ಮನಸ್ತಾಪವುಂಟಾಗಿ ಸುಭಾಕರ್ ಫ್ಲ್ಯಾಟ್ ಗೆ ಬೀಗ ಹಾಕಿದ್ದರು ಎನ್ನಲಾಗಿದೆ. ಆದರೆ ಅಕ್ಟೋಬರ್ 3ರಂದು ಸ್ವರ್ಣಲತಾ ಬೀಗ ಒಡೆದು ಮನೆಗೆ ನುಗ್ಗಿದ್ದಾರೆ. ಅಕ್ರಮವಾಗಿ ಫ್ಲ್ಯಾಟ್ ಪ್ರವೇಶಿಸಿದ್ದಾರೆ ಎಂದು ಸುಭಾಕರ್ ಆರೋಪಿಸಿದ್ದಾರೆ. ಆಡುಗೋಡಿ ಠಾಣೆಯಲ್ಲಿ ಸ್ವರ್ಣಲತಾ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.