alex Certify ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್; ರೈಲ್ವೆಯಲ್ಲಿದೆ 3000ಕ್ಕೂ ಅಧಿಕ ಹುದ್ದೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್; ರೈಲ್ವೆಯಲ್ಲಿದೆ 3000ಕ್ಕೂ ಅಧಿಕ ಹುದ್ದೆ

ನೀವು ರೈಲ್ವೇ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿದ್ದೀರಾ..? ಹಾಗಾದ್ರೆ ನೀವು ಈ ಸುದ್ದಿ ನೋಡಲೇಬೇಕು. ದಕ್ಷಿಣ ರೈಲ್ವೆ ಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಒಟ್ಟು 3154 ಹುದ್ದೆಗಳಿಗೆ ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಎಸ್ ಎಸ್ ಎಲ್ ಸಿ ಹಾಗೂ ಐಟಿಐ ಪೂರ್ಣಗೊಳಿಸಿರಬೇಕು.

ಇನ್ನು ಈ ಹುದ್ದೆಗಳಿಗೆ ಕನಿಷ್ಠ 15 ವರ್ಷ ಆದರೆ, ಗರಿಷ್ಠ 24 ವರ್ಷದವರಾಗಿರಬೇಕು. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ ಮಾಡಲಾಗಿದೆ. ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇದೆ. ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕ ಇದೆ. ಇನ್ನು ಎಸ್‌ಸಿ, ಎಸ್‌ಟಿ, ಅಂಗವಿಕಲ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ ವಿನಾಯಿತಿ ಕೊಡಲಾಗಿದೆ.

ಈ ಹುದ್ದೆಗಳಿಗೆ ನೇರ ನೇಮಕಾತಿ ಆಯ್ಕೆ ಮಾಡ್ತಾ ಇದ್ದಾರೆ. ಎಸ್ಎಸ್ಎಲ್‌ಸಿ ಹಾಗೂ ಐಟಿಐನಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ತಯಾರಿಸಲಾಗುತ್ತದೆ. ಇನ್ನು ಆಸಕ್ತ ಅಭ್ಯರ್ಥಿಗಳು https://sr.indianrailways.gov.in ಗೆ ಲಾಗಿನ್ ಆಗಿ ಅರ್ಜಿ ಹಾಕಬಹುದು. ಈ ಮೂಲಕವೇ ಅರ್ಜಿ ಹಾಕಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...