ರಾಯಚೂರು: ದಸರಾ ಬನ್ನಿ ಕೊಡುವ ನೆಪದಲ್ಲಿ ಕರೆದು ಪಿಡಿಒ ಓರ್ವರನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ಸೀಮೆ ಈರಣ್ಣ ದೇಗುಲದ ಬಳಿ ನಡೆದಿದೆ.
ಕೋಠಾ ಗ್ರಾಮ ಪಂಚಾಯಿತಿ ಪಿಡಿಒ ಗಜದಂಡಯ್ಯ ಕೊಲೆಯಾದ ವ್ಯಕ್ತಿ. ಹಳೆ ವೈಷಮ್ಯ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಪಿಡಿಒ ನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಲಿಂಗಸಗೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.