ಬೆಂಗಳೂರು: ಎಸ್.ಟಿ ವರ್ಗಕ್ಕೆ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಲಾಗಿದ್ದು, ಈ ನಿಟ್ಟಿನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದ್ದಾರೆ.
ಬಿಜೆಪಿ ಕೋರ್ ಕಮಿಟಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಅಕ್ಟೋಬರ್ 9ರಿಂದ ವಾಲ್ಮೀಕಿ ಜಯಂತಿ ಇದೆ. ಅಂದೇ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿದ್ದೇವೆ. ಎಸ್.ಟಿ.ವರ್ಗಕ್ಕೆ ಮೀಸಲಾತಿ ಹೆಚ್ಚಿಸುವಂತೆ ಸರ್ವಾನುಮತದಿಂದ ಆಗ್ರಹಿಸಲಾಗಿದೆ.
ಈ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಎಸ್.ಟಿ.ವರ್ಗಕ್ಕೆ ಶೇ.7.5ರಷ್ಟು ಮೀಸಲಾತಿ ಘೋಷಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.