ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಯಲಿದ್ದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳದ ಬಗ್ಗೆ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲಾಗುತ್ತದೆ.
ಜನಸಂಖ್ಯೆಗೆ ಜನಸಂಖ್ಯೆಗೆ ಅನುಗುಣವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳ ಮಾಡಲು ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ ವಿಧಾನ ಮಂಡಲ ಉಭಯ ಸದನಗಳ ವಿವಿಧ ಪಕ್ಷಗಳ ನಾಯಕರ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಮುಖ್ಯಮಂತ್ರಿಗಳು ಸಚಿವ ಸಂಪುಟದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳದ ಬಗ್ಗೆ ಅನುಮೋದನೆ ಪಡೆಯಲಿದ್ದಾರೆ. ಎಸ್.ಸಿ. ಮೀಸಲಾತಿ ಶೇಕಡ 15 ರಿಂದ ಶೇಕಡ 17ಕ್ಕೆ, ಎಸ್.ಟಿ. ಮೀಸಲಾತಿ ಪ್ರಮಾಣ ಶೇಕಡ 3 ರಿಂದ ಶೇಕಡ 7ರಷ್ಟು ಹೆಚ್ಚಳ ಮಾಡಲು ನಿನ್ನೆ ಸರ್ವ ಪಕ್ಷ ಸಭೆ ಬಳಿಕ ಮೀಸಲಾತಿ ಹೆಚ್ಚಳದ ಬಗ್ಗೆ ಸಿಎಂ ಘೋಷಣೆ ಮಾಡಿದ್ದರು. ಇಂದು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದು ಆದೇಶ ಪ್ರಕಟಿಸುವ ಸಾಧ್ಯತೆ ಇದೆ.