ಸಿದ್ದರಾಮಯ್ಯ ಹೇಳಿಕೆ ವಿರೋಧಿಸಿ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿದ್ದ ಪೊಲೀಸ್ ಕಾನ್ಸ್ಟೇಬಲ್ ಸಸ್ಪೆಂಡ್ ಮಾಡಲಾಗಿದೆ.
ವಿಜಯಪುರ ಗ್ರಾಮಾಂತರ ಠಾಣೆ ಪೊಲೀಸ್ ಕಾನ್ಸ್ಟೇಬಲ್ ರಾಜಶೇಖರ ಅವರನ್ನು ಅಮಾನತು ಮಾಡಲಾಗಿದೆ. ಬಿಜೆಪಿಯವರ ಜೊತೆ ಪೊಲೀಸರು ಶಾಮೀಲಾಗಿದ್ದಾರೆ ಎಂದು ಭಾರತ್ ಜೋಡೋ ಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು.
ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿದ್ದ ರಾಜಶೇಖರ್, ಈ ರೀತಿ ಆರೋಪ ಮಾಡುವ ನೀವು ಎಸ್ಕಾರ್ಟ್ ಇಲ್ಲದೆ ಮನೆಗೆ ಹೋಗಿ ಎಂದು ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಟೀಕಿಸಿದ್ದರು. ಇದರ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಸಿದ್ದರಾಮಯ್ಯ ಅಭಿಮಾನಿಗಳು ಕಾನ್ಸ್ಟೇಬಲ್ ರಾಜಶೇಖರ್ ಅವರನ್ನು ಅಮಾನತು ಮಾಡಬೇಕೆಂದು ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ರಾಜಶೇಖರ್ ಅವರನ್ನು ಅಮಾನತು ಮಾಡಲಾಗಿದೆ ಎಂದು ಹೇಳಲಾಗಿದೆ.