ದಿ.ಪುನೀತ್ ರಾಜ್ ಕುಮಾರ್ ಅವರ ಡ್ರೀಮ್ ಪ್ರಾಜೆಕ್ಟ್ ಗಂಧದಗುಡಿ ಟ್ರೇಲರ್ ಇಂದು ಅದ್ದೂರಿಯಾಗಿ ಬಿಡುಗಡೆಯಾಗಿದ್ದು, ಟ್ರೇಲರ್ ನೋಡಿ ಪ್ರಧಾನಿ ನರೇಂದ್ರ ಮೋದಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಅಪ್ಪು ಲಕ್ಷಾಂತರ ಜನರ ಮನಸ್ಸಿನಲ್ಲಿ ಬದುಕಿದ್ದಾರೆ. ಗಂಧದಗುಡಿ ಸಾಕ್ಷ್ಯಚಿತ್ರ ಪ್ರಕೃತಿ ಮಾತೆ, ಪರಿಸರ ಸಂರಕ್ಷಣೆಗೆ, ಕರ್ನಾಟಕದ ನೈಸರ್ಗಿಕ ಸೌಂದರ್ಯಕ್ಕೆ ಗೌರವವಾಗಿದೆ ಎಂದು ತಿಳಿಸಿದ್ದಾರೆ.
ಪುನೀತ್ ರಾಜ್ ಕುಮಾರ್ ಅಪ್ರತಿಮ ಪ್ರತಿಭಾವಂತ. ಒಬ್ಬ ತೇಜಸ್ಸಿನ ವ್ಯಕ್ತಿಯಾಗಿದ್ದರು. ಈ ಪ್ರಯತ್ನಕ್ಕೆ ನನ್ನ ಶುಭಾಷಯಗಳು ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಅವರು ಗಂಧದಗುಡಿ ಟ್ರೇಲರ್ ನ್ನು ಪ್ರಧಾನಿ ಮೋದಿಯವರಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದರು. ಈ ಟ್ವೀಟ್ ಗೆ ಇದೀಗ ಪ್ರಧಾನಿ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ.