ವಿಜಯಪುರ: ಬ್ರಾಹ್ಮಣ ಸಮುದಾಯದವರಿಗೆ ಅಲ್ಪಸಂಖ್ಯಾತ ಸ್ಥಾನಮಾನ ಸಿಗಬೇಕು ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಅವರು, ಜನಸಂಖ್ಯೆಯಲ್ಲಿ ಬ್ರಾಹ್ಮಣರು ಕೇವಲ ಶೇಕಡ 2 -3 ರಷ್ಟು ಇದ್ದಾರೆ. ದೇಶದಲ್ಲಿ ನಿಜವಾದ ಅಲ್ಪಸಂಖ್ಯಾತ ಸಮುದಾಯವೆಂದರೆ ಬ್ರಾಹ್ಮಣರು. ಹೀಗಾಗಿ ಅಲ್ಪಸಂಖ್ಯಾತರ ಪಟ್ಟಿಯಲ್ಲಿ ಬ್ರಾಹ್ಮಣರನ್ನು ಸೇರಿಸಬೇಕು ಎಂದು ಹೇಳಿದ್ದಾರೆ.
ಮುಸ್ಲಿಂ ಸಮುದಾಯದವರು ಅಲ್ಪಸಂಖ್ಯಾತರಲ್ಲವೇ ಅಲ್ಲ. ಒಂದು ಜನಾಂಗದಷ್ಟಿರುವ ಮುಸ್ಲಿಮರು ಹೇಗೆ ಅಲ್ಪಸಂಖ್ಯಾತರಾಗುತ್ತಾರೆ? ದೇಶದ್ರೋಹಿ ಕೆಲಸ, ಪಾಕಿಸ್ತಾನದ ಪರ ಅವರು ಮಾತನಾಡುತ್ತಾರೆ. ಅಂತವರಿಗೆ ಮೀಸಲಾತಿ ಬೇಕು ಎಂದರೆ ಹೇಗೆ ಎಂದು ಯತ್ನಾಳ್ ಪ್ರಶ್ನಿಸಿದ್ದಾರೆ.
ಬಹಳ ಸೌಲಭ್ಯ ಬೇಕಿದ್ದರೆ ಮುಸ್ಲಿಮರು ಪಾಕಿಸ್ತಾನಕ್ಕೆ ಹೋಗಲಿ. ಸೌಲಭ್ಯ ಪಡೆಯಲು ಅವರು ಪಾಕಿಸ್ತಾನಕ್ಕೆ ಹೋಗಬಹುದು ಎಂದು ಹೇಳಿದ್ದಾರೆ.