
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದಲ್ಲಿ ನಡೆದ ಅಪಘಾತದಲ್ಲಿ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆಗೆ ಬಂದಿದ್ದ ಪಕ್ಷದ ಕಾರ್ಯಕರ್ತ ಮೃತಪಟ್ಟಿದ್ದಾರೆ.
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ರಮೇಶ(38) ಮೃತಪಟ್ಟವರು ಎಂದು ಹೇಳಲಾಗಿದೆ. ಖಾಸಗಿ ಬಸ್ ನಲ್ಲಿ ಭಾರತ್ ಜೋಡೋ ಯಾತ್ರೆಗೆ ಕಾಂಗ್ರೆಸ್ ಕಾರ್ಯಕರ್ತರನ್ನು ಕರೆತರಲಾಗಿತ್ತು. ರಮೇಶ್ ಅವರು ಹಿರಿಯೂರಿನಲ್ಲಿ ನಡೆದ ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.
ಹಿರಿಯೂರು ಪಟ್ಟಣದ ಟಿಬಿ ಸರ್ಕಲ್ ಬಳಿ ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ ಹೊಡೆದು ರಮೇಶ್ ಮೃತಪಟ್ಟಿದ್ದಾರೆನ್ನಲಾಗಿದೆ. ಹಿರಿಯೂರು ಟೌನ್ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.