ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಲೋಹಿತಾಶ್ವ ಪುತ್ರ ಶರತ್ ಲೋಹಿತಾಶ್ವ ತಿಳಿಸಿದ್ದಾರೆ.
ಹೃದಯಾಘಾತಕ್ಕೀಡಾಗಿದ್ದ ಲೋಹಿತಾಶ್ವ ಅವರನ್ನು ಬೆಂಗಳೂರಿನ ಸಗಾರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಕ್ಷಣ ಕ್ಷಣಕ್ಕೂ ಕ್ಷೀಣಿಸುತ್ತಿದೆ. ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.
ಸಮಯದ ಗೊಂಬೆ, ಪರಶುರಾಮ್ ಚಿತ್ರಗಳಲ್ಲಿ ಡಾ.ರಾಜ್ ಕುಮಾರ್ ಅವರೊಂದಿಗೆ ಅಭಿನಯಿಸಿದ್ದಾರೆ. ಶಂಕರ್ ನಾಗ್, ಸಾಹಸ ಸಿಂಹ ವಿಷ್ಣುವರ್ಧನ್, ಅಂಬರೀಷ್ ಸೇರಿದಂತೆ ಹಲವು ಖ್ಯಾತ ನಟರೊಂದಿಗೆ ಅಭಿನಯಿಸಿರುವ ಲೋಹಿತಾಶ್ವ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.