alex Certify BIG NEWS: ಮಂತ್ರಾಲಯಕ್ಕೆ ಭೇಟಿ ನೀಡಿ ಗುರುರಾಯರ ದರ್ಶನ ಪಡೆದ ಸಿಎಂ ಬೊಮ್ಮಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಂತ್ರಾಲಯಕ್ಕೆ ಭೇಟಿ ನೀಡಿ ಗುರುರಾಯರ ದರ್ಶನ ಪಡೆದ ಸಿಎಂ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಮಂತ್ರಾಲಯಕ್ಕೆ ಭೇಟಿ ನೀಡಿ ಕಲಿಯುಗದ ಕಾಮಧೇನು ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದರು.

ರಾಯಚೂರಿನ ಗಿಲ್ಲೆಸಗೂರಿನಿಂದ ಬಿಜೆಪಿ ಜನಸಂಕಲ್ಪ ಯಾತ್ರೆ ಆರಂಭವಾಗಿದ್ದು, ಈ ಮೂಲಕ 2023ರ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಾಂಚಜನ್ಯ ಮೊಳಗಿಸಿದೆ. ಜನಸಂಕಲ್ಪ ಯಾತ್ರೆಗೂ ಮುನ್ನ ಸಿಎಂ ಬಸವರಾಜ್ ಬೊಮ್ಮಾಯಿ ಮಂತ್ರಾಲಯ ಗುರುರಾಯರ ಮಠಕ್ಕೆ ಭೇಟಿ ನೀಡಿ ಗುರು ರಾಘವೇಂದ್ರಸ್ವಾಮಿಗಳ ಬೃಂದಾವನ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಬಿ‌. ಶ್ರೀರಾಮುಲು, ಶಂಕರ ಪಾಟೀಲ ಮುನೇನಕೊಪ್ಪ ಹಾಜರಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...