ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಬಿಜೆಪಿ ಮುಖಂಡ ಎನ್.ಆರ್. ರಮೇಶ್ ದೂರು ನೀಡಿದ್ದು, ನಿವೃತ್ತ ಐಎಎಸ್ ಅಧಿಕಾರಿ ಶ್ಯಾಮ್ ಭಟ್ ವಿರುದ್ಧವೂ ದೂರು ಸಲ್ಲಿಸಲಾಗಿದೆ.
ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಧ್ಯಕ್ಷರೂ ಆಗಿರುವ ಎನ್ ಆರ್ ರಮೇಶ್, ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಕಾನೂನು ಬಾಹಿರವಾಗಿ ಸರ್ಕಾರಿ ಭೂಮಿಯನ್ನು ಡಿ ನೋಟಿಫೈ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಕುರಿತಂತೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲು ರಮೇಶ್ ಲೋಕಾಯುಕ್ತರಿಗೆ ಸಲ್ಲಿಸಿರುವ ದೂರಿನಲ್ಲಿ ಮನವಿ ಮಾಡಿದ್ದಾರೆ.