ತೀವ್ರ ಕುತೂಹಲ ಕೆರಳಿಸಿದ್ದ ಹಿಜಾಬ್ ಕುರಿತ ಸುಪ್ರೀಂ ಕೋರ್ಟ್ ತೀರ್ಪು ಹೊರಬಿದ್ದಿದ್ದು, ಇಬ್ಬರೂ ನ್ಯಾಯಾಧೀಶರು ವಿಭಿನ್ನ ತೀರ್ಪು ನೀಡಿದ್ದಾರೆ. ಹೀಗಾಗಿ ಈ ಪ್ರಕರಣ ಸಿಜೆಐ ಪೀಠಕ್ಕೆ ವರ್ಗಾಯಿಸಲಾಗಿದೆ.
ಶಾಲೆಗಳಲ್ಲಿ ಸಮವಸ್ತ್ರ ಧರಿಸಲು ಅವಕಾಶ ನೀಡುವಂತೆ ಕೋರಿ ಉಡುಪಿ ಮೂಲದ ವಿದ್ಯಾರ್ಥಿನಿಯರು ಹೈಕೋರ್ಟ್ ಮೊರೆ ಹೋಗಿದ್ದು, ಈ ಸಂದರ್ಭದಲ್ಲಿ ಹಿಜಾಬ್ ಧರಿಸುವುದು ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ ಎಂದು ಹೇಳಿದ್ದ ನ್ಯಾಯಾಲಯ ಸರ್ಕಾರ ಅಥವಾ ಶಿಕ್ಷಣ ಸಂಸ್ಥೆ ನಿಗದಿಪಡಿಸಿದ ಸಮವಸ್ತ್ರ ಧರಿಸುವಂತೆ ತಿಳಿಸಿತ್ತು.
ಇದನ್ನು ಪ್ರಶ್ನಿಸಿ ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಇದೀಗ ವಿಭಿನ್ನ ತೀರ್ಪು ಪ್ರಕಟಿಸಲಾಗಿದೆ. ನ್ಯಾಯಮೂರ್ತಿ ಹೇಮಂತ್ ಗುಪ್ತಾ, ಮುಸ್ಲಿಂ ವಿದ್ಯಾರ್ಥಿನಿಯರ ಮೇಲ್ಮನವಿ ವಜಾಗೊಳಿಸಿದರೆ ಮತ್ತೊಬ್ಬ ನ್ಯಾಯಾಧೀಶರಾದ ಹಿಮಾಂಶು, ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ಈಗ ಇದು ಸಿಜೆಐ ಪೀಠದ ಅಂಗಳಕ್ಕೆ ಬಂದಿದೆ.