alex Certify ಪೋಷಕರಿಗೆ ಮುಖ್ಯ ಮಾಹಿತಿ: ಶಾಲೆ ಪ್ರವೇಶಕ್ಕೆ ಮಗುವಿಗೆ 6 ವರ್ಷ ಪೂರ್ಣಗೊಂಡಿರಬೇಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೋಷಕರಿಗೆ ಮುಖ್ಯ ಮಾಹಿತಿ: ಶಾಲೆ ಪ್ರವೇಶಕ್ಕೆ ಮಗುವಿಗೆ 6 ವರ್ಷ ಪೂರ್ಣಗೊಂಡಿರಬೇಕು

ಬೆಂಗಳೂರು: ಮಕ್ಕಳನ್ನು ಶಾಲೆಗೆ ಸೇರುವ ಪೋಷಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಒಂದನೇ ತರಗತಿಗೆ ಮಗು ಸೇರಿಸಲು ಆರು ವರ್ಷ ಪೂರ್ಣಗೊಂಡಿರಬೇಕು. ಈ ನಿಯಮವನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿಗೊಳಿಲಾಗುವುದು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ ಈ ಬಗ್ಗೆ ಮಾಹಿತಿ ನೀಡಿ, ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಕಾರ ಒಂದನೇ ತರಗತಿ ಅಥವಾ ಶಾಲಾ ಶಿಕ್ಷಣಕ್ಕೆ ಪ್ರವೇಶ ಪಡೆಯಲು 6 ವರ್ಷ ಪೂರ್ಣಗೊಳಿಸುವುದು ಕಡ್ಡಾಯವಾಗಿದೆ. ಶಿಕ್ಷಣ ತಜ್ಞರ ಸಲಹೆ ಕೂಡ ಇದೇ ಆಗಿದೆ ಎಂದು ಹೇಳಿದ್ದಾರೆ.

ಈಗಾಗಲೇ 23 ರಾಜ್ಯಗಳಲ್ಲಿ ಈ ನಿಯಮ ಅಳವಡಿಸಿಕೊಳ್ಳಲಾಗಿದ್ದು, ಕರ್ನಾಟಕದಲ್ಲಿ ಮುಂದಿನ ಶೈಕ್ಷಣಿಕ ಸಾಲಿನಿಂದ ಪೂರ್ವ ಪ್ರಾಥಮಿಕ ಶಿಕ್ಷಣದಲ್ಲಿ 6 ವರ್ಷ ಪೂರ್ಣಗೊಂಡಿರುವುದು ಕಡ್ಡಾಯವೆನ್ನುವ ನಿಯಮ ಅಳವಡಿಸಲಾಗುವುದು ಎಂದು ಹೇಳಿದ್ದಾರೆ.

ಕೊರೋನಾ ನಂತರ ಮಕ್ಕಳು ಕಲಿಕೆಯಲ್ಲಿ ಹಿಂದುಳಿದಿದ್ದು, ಕಲಿಕೆ ಸಾಮರ್ಥ್ಯ ಹೆಚ್ಚಿಸಲು 5 ಮತ್ತು 8ನೇ ತರಗತಿಯಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲು ಚಿಂತನೆ ಇದ್ದು, ಈ ಕುರಿತು ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...