ಎರಡು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಇಂದು ದಿನಾಂಕ ಘೋಷಣೆಯಾಗಲಿದೆ. ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ ದಿನಾಂಕವನ್ನು ದೆಹಲಿಯ ವಿಜ್ಞಾನ ಭವನದಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಸುದ್ದಿಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರು ಘೋಷಿಸಲಿದ್ದಾರೆ.
ಹಿಮಾಚಲ ಪ್ರದೇಶ ವಿಧಾನಸಭೆಯ ಅವಧಿ ಜನವರಿ 8, 2023 ಕ್ಕೆ ಅಂತ್ಯವಾಗಲಿದ್ದರೆ, ಗುಜರಾತ್ ವಿಧಾನಸಭೆಯ ಅವಧಿ ಫೆಬ್ರವರಿ 18, 2023 ಕ್ಕೆ ಪೂರ್ಣಗೊಳ್ಳಲಿದೆ.
ಪ್ರಸ್ತುತ ಹಿಮಾಚಲ ಪ್ರದೇಶ ವಿಧಾನಸಭೆಯಲ್ಲಿ 45 ಬಿಜೆಪಿ ಶಾಸಕರು ಹಾಗೂ ಕಾಂಗ್ರೆಸ್ಸಿನ 20 ಶಾಸಕರಿದ್ದು, 182 ಸದಸ್ಯ ಬಲದ ಗುಜರಾತ್ ವಿಧಾನಸಭೆಯಲ್ಲಿ ಬಿಜೆಪಿಯ 111 ಹಾಗೂ ಕಾಂಗ್ರೆಸ್ಸಿನ 62 ಶಾಸಕರಿದ್ದಾರೆ.