ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವುದಕ್ಕೆ ನಾಲಾಯಕ್. ಬೇರೆ ಪಕ್ಷಗಳ ನಾಯಕರ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ. ಅವರು ತಾನು ಸತ್ಯಹರಿಶ್ಚಂದ್ರರ ಮೊಮ್ಮಗ ಎಂದು ಭಾವಿಸಿದ್ದಾರೆ. ಸಿದ್ದರಾಮಯ್ಯ ಭಸ್ಮಾಸುರ ಇದ್ದ ಹಾಗೆ. ಅವರು ಯಾವ ಪಕ್ಷದಲ್ಲಿದ್ದರೂ, ಆ ಪಕ್ಷ, ನಾಯಕರನ್ನು ಬೆಳೆಯಲು ಬಿಡುವುದಿಲ್ಲ. ಸಿದ್ದರಾಮಯ್ಯ ಬಳಿ ಹೋಗುವವರು ಭಸ್ಮವಾಗುತ್ತಾರೆ. ಅಂತಹ ಭಸ್ಮಾಸುರನನ್ನು ಬಿಜೆಪಿ ಸುಟ್ಟುಬಿಡುತ್ತದೆ ಎಂದು ಬಾಗಲಕೋಟೆಯಲ್ಲಿ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.