ರಾಜ್ಯದ ಆರ್ಥಿಕತೆ ಮತ್ತು ಲಭ್ಯವಿರುವ ಸಂಪನ್ಮೂಲಗಳನ್ನು ಗಮನದಲ್ಲಿರಿಸಿಕೊಂಡು ಮಣಿಪುರ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ನಾಲ್ಕಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದುವವರಿಗೆ ಸರ್ಕಾರಿ ಉದ್ಯೋಗ ಮತ್ತು ಇತರೆ ಸೌಲಭ್ಯಗಳನ್ನು ನೀಡದಿರಲು ನಿರ್ಧರಿಸಲಾಗಿದೆ.
ಶುಕ್ರವಾರದಂದು ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ರಾಜ್ಯ ಜನಸಂಖ್ಯಾ ಆಯೋಗವನ್ನು ಸುಗ್ರೀವಾಜ್ಞೆ ಮುಖಾಂತರ ಜಾರಿಗೆ ತರಲು ಒಪ್ಪಿಗೆ ಸೂಚಿಸಲಾಗಿದೆ.
ಇನ್ನು ಮುಂದೆ ನಾಲ್ಕು ಮಕ್ಕಳನ್ನು ಹೊಂದುವ ಕುಟುಂಬಕ್ಕೆ ಸರ್ಕಾರಿ ನೌಕರಿ ಸೇರಿದಂತೆ ಇತರೆ ಸರ್ಕಾರಿ ಸೌಲಭ್ಯಗಳನ್ನು ನೀಡಲಾಗುವುದಿಲ್ಲ ಎಂದು ಮಣಿಪುರ ಸರ್ಕಾರದ ವಕ್ತಾರ ಡಾ. ಸಪ್ತಮ್ ರಂಜನ್ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದಾರೆ.