ಮುಂಬೈ: ಮುಂಬೈನಿಂದ ಬೆಂಗಳೂರಿಗೆ ಹಾರಾಟ ನಡೆಸಿದ್ದ ಆಕಾಶ್ ಏರ್ ಲೈನ್ಸ್ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ.
ಪ್ರಯಾಣಿಕರನ್ನು ಹೊತ್ತು ಮುಂಬೈ ಏರ್ ಪೋರ್ಟ್ ನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ವಿಮಾನದಲ್ಲಿ ಸುಟ್ಟವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ತಕ್ಷಣ ವಿಮಾನವನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಮಾಡಲಾಗಿದೆ.
ಮುಂಬೈ ಏರ್ ಪೋರ್ಟ್ ನಿಂದ ಟೇಕ್ ಆಫ್ ಆದ ಕೆಲ ಸಮಯದಲ್ಲೇ ವಿಮಾನದ ಕ್ಯಾಬಿನ್ ನಲ್ಲಿ ಸುಟ್ಟ ವಾಸನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಮತ್ತೆ ಮುಂಬೈ ಏರ್ ಪೋರ್ಟ್ ನಲ್ಲಿಯೇ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ. ವಿಮಾನದಲ್ಲಿದ್ದ ಪ್ರಯಾಣಿಕರು, ಸಿಬ್ಬಂದಿಗಳು ಸುರಕ್ಷಿತರಾಗಿದ್ದಾರೆ ಎಂದು ತಿಳಿದುಬಂದಿದೆ.