ಚಿತ್ರದುರ್ಗ: ಚಿತ್ರದುರ್ಗ ಮುರುಘಾ ಮಠದ ಮುರುಘಾ ಶರಣರ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಆರ್ಪಿಸಿ ಸೆಕ್ಷನ್ 164ರ ಅಡಿ ಸಂತ್ರಸ್ತೆ ಹೇಳಿಕೆ ದಾಖಲಿಸಿಕೊಳ್ಳಲು ಕೋರ್ಟಿಗೆ ಮನವಿ ಮಾಡಿದ್ದೇವೆ ಎಂದು ಚಿತ್ರದುರ್ಗ ಪೊಲೀಸ್ ವರಿಷ್ಠಾಧಿಕಾರಿ ಕೆ. ಪರಶುರಾಮ್ ಮಾಹಿತಿ ನೀಡಿದ್ದಾರೆ.
ಸಿಆರ್ಪಿಸಿ ಸೆಕ್ಷನ್ 161 ರ ಅಡಿ ಒಬ್ಬ ಬಾಲಕಿ ಮತ್ತು ಪೋಷಕರ ಹೇಳಿಕೆ ದಾಖಲಿಸಲಾಗಿದೆ. ತನಿಖೆಗಾಗಿ ಉಳಿದ ಸಂತ್ರಸ್ತೆಯರನ್ನು ಕರೆಸುವಂತೆ ಮನವಿ ಮಾಡಿದ್ದೇವೆ. ಮಕ್ಕಳ ಕಲ್ಯಾಣ ಸಮಿತಿಗೆ ಮನವಿ ಮಾಡಿದ್ದೆ ಎಂದು ಎಸ್ಪಿ ಪರಶುರಾಮ್ ತಿಳಿಸಿದ್ದಾರೆ.