ಕಳೆದ ಕೆಲವು ದಿನಗಳಿಂದ ಬಿಡುವ ನೀಡಿದ್ದ ಮಳೆ ಈಗ ಮತ್ತೆ ಸುರಿಯುತ್ತಿದೆ. ಅದರಲ್ಲೂ ಒಂದು ವಾರದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ನದಿಗಳು ತುಂಬಿ ಹರಿಯುತ್ತಿವೆ. ಅಲ್ಲದೆ ಜಮೀನುಗಳಿಗೆ ನೀರು ಹೋಗಿ ಅಪಾರ ನಷ್ಟವೂ ಸಂಭವಿಸಿದೆ.
ಇದರ ಮಧ್ಯೆ ರಾಜ್ಯದಲ್ಲಿ ಮಳೆಯ ಆರ್ಭಟ ಮತ್ತಷ್ಟು ಜಾಸ್ತಿಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 19 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಹಾಗೂ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಧಾರವಾಡ, ರಾಯಚೂರು, ಕೊಪ್ಪಳ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ರಾಮನಗರ, ತುಮಕೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದ್ದು, ಚಾಮರಾಜನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.