ಭಾರತ ಸಂಚಾರ ನಿಗಮವು ಹೈ ಸ್ಪೀಡ್ ಇಂಟರ್ನೆಟ್ ಸೌಲಭ್ಯವನ್ನು ಗ್ರಾಮಾಂತರ ಪ್ರದೇಶಗಳಲ್ಲಿ ಒದಗಿಸುವ ಸಲುವಾಗಿ ಹೊಸ ಯೋಜನೆಯೊಂದನ್ನು ರೂಪಿಸಿದ್ದು, ಪ್ರಾಯೋಗಿಕವಾಗಿ ಇದು ದೇಶದ ನಾಲ್ಕು ಪ್ರದೇಶಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.
ಈ ನಾಲ್ಕು ಪ್ರದೇಶಗಳ ಪೈಕಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಸಹ ಆಯ್ಕೆಯಾಗಿದ್ದು, ಸಂಸದ ಬಿ.ವೈ. ರಾಘವೇಂದ್ರ ತೀರ್ಥಹಳ್ಳಿ ತಾಲೂಕಿನ ಗುಡ್ಡೇಕೇರಿ ಹೊಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುವ ವೇಳೆ ಈ ವಿಷಯ ತಿಳಿಸಿದ್ದಾರೆ.
ಮಲೆನಾಡು ಭಾಗದಲ್ಲಿ ಇಂಟರ್ನೆಟ್ ಸೌಲಭ್ಯ ಒದಗಿಸುವಂತೆ ತಾವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದು, ಈ ಹಿನ್ನಲೆಯಲ್ಲಿ ಈಗ ಪ್ರಾಯೋಗಿಕವಾಗಿ ಮಲೆನಾಡಿನ ಸಾಗರ ತಾಲೂಕನ್ನು ಹೈ ಸ್ಪೀಡ್ ಇಂಟರ್ನೆಟ್ ಸೌಲಭ್ಯಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.