ಮೀನಿನ ಖಾದ್ಯಗಳನ್ನು ಸವಿಯಲು ಬಹುತೇಕರು ಇಷ್ಟಪಡುತ್ತಾರೆ ಇದು ಆರೋಗ್ಯಕ್ಕೂ ಸಹ ಒಳ್ಳೆಯದು ಎಂದು ಹೇಳಲಾಗುತ್ತದೆ. ಇದೀಗ ಮತ್ಸ್ಯ ಪ್ರಿಯರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಇನ್ನು ಮುಂದೆ ಮನೆ ಬಾಗಿಲಿಗೆ ತಾಜಾ ಮೀನು ಬರಲಿದ್ದು, ಶೀಘ್ರದಲ್ಲೇ ಈ ಯೋಜನೆ ಜಾರಿಗೆ ತರಲಾಗುತ್ತದೆ.
ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ಸೀ ಫುಡ್ಸ್ ಲಾಜಿಸ್ಟಿಕ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಇಂತಹದೊಂದು ಯೋಜನೆ ಜಾರಿಗೊಳಿಸಲಾಗುತ್ತಿದ್ದು, ಇದು ಶೀಘ್ರದಲ್ಲೇ ಕಾರ್ಯರೂಪಕ್ಕೆ ಬರಲಿದೆ ಎಂದು ಹೇಳಲಾಗಿದೆ.
ಮಂಗಳೂರು ಮತ್ತು ಮಲ್ಪೆ ಮೀನುಗಾರಿಕಾ ಬಂದರುಗಳಿಂದ ತಾಜಾ ಮೀನುಗಳನ್ನು ವಿಮಾನದ ಮೂಲಕ ಬೆಂಗಳೂರಿಗೆ ಸಾಗಿಸಿ ಬಳಿಕ ಅಲ್ಲಿಂದ ಚಿಲ್ಲರೆ ಮಳಿಗೆಗಳು ಹಾಗೂ ಅಪ್ಲಿಕೇಶನ್ ಮೂಲಕ ತಾಜಾ ಮೀನು ಮನೆ ಬಾಗಿಲಿಗೆ ತಲುಪಿಸಲಾಗುತ್ತದೆ ಎಂದು ತಿಳಿದುಬಂದಿದೆ.