ಬೆಂಗಳೂರು: ಹಾಲಿ 300 ಮಂದಿಗೆ ಕೇಬಲ್ ನೆಟ್ ಖರೀದಿಗೆ ನೀಡುತ್ತಿರುವ 3 ಲಕ್ಷ ರೂಪಾಯಿ ಸಹಾಯಧನವನ್ನು 1000 ಮೀನುಗಾರರಿಗೆ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಒಳನಾಡು ಮೀನು ಉತ್ಪಾದಕರ ಸಮಾವೇಶದಲ್ಲಿ ಮಾತನಾಡಿದ ಸಿಎಂ, ರಾಜ್ಯದಲ್ಲಿ ಮೀನುಗಾರಿಕೆ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮೀನು ಉತ್ಪಾದಕರಿಗೆ ವಿವಿಧ ಸೌಲಭ್ಯ ಕೊಡುಗೆ ನೀಡುವುದಾಗಿ ಹೇಳಿದ್ದಾರೆ.
ಮೀನುಗಾರರಿಗೆ ಪ್ರೋತ್ಸಾಹ ಧನ, ಮನೆ ಮಂಜೂರು, ಬೋಟ್, ಡೀಸೆಲ್ ಮತ್ತು ಸೀಮೆಎಣ್ಣೆಗೆ ಸಹಾಯಧನ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದು, ಮುಂದಿನ ದಿನಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಕಾಲಮಿತಿಯೊಳಗೆ ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.
ಮೀನುಗಾರರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ವಿಸ್ತರಿಸಿದ್ದು 50 ಕೋಟಿ ರೂ. ನೀಡಲಾಗುವುದು. 5000 ಮನೆ ನಿರ್ಮಾಣಕ್ಕೆ ಮಂಜೂರಾತಿ ನೀಡಿದ್ದು, ಜನವರಿಯೊಳಗೆ ಪೂರ್ಣಗೊಳಿಸುವ ಗುರಿ ಇದೆ ಎಂದರು.