
ನವೆಂಬರ್ 3ರಂದು ಈ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಇಲ್ಲಿಂದ ದಿವಂಗತ ರಮೇಶ್ ಲಾಟ್ಕೆ ಅವರ ಪತ್ನಿ ಕಣಕ್ಕಿಳಿಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯನ್ನು ಹಾಕದೆ ಅವರನ್ನು ಬೆಂಬಲಿಸುವ ಮೂಲಕ ದಿವಂಗತ ಶಾಸಕರಿಗೆ ಗೌರವ ಸಲ್ಲಿಸಲಿ ಎಂದು ರಾಜ್ ಠಾಕ್ರೆ ಹೇಳಿದ್ದಾರೆ.
ಈ ಕುರಿತಂತೆ ಭಾನುವಾರದಂದು ರಾಜ್ ಠಾಕ್ರೆ ಟ್ವೀಟ್ ಮಾಡಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಪಕ್ಷದ ನಾಯಕರೊಂದಿಗೆ ಈ ಕುರಿತು ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ.