ಬೆಂಗಳೂರು: ದೀಪಾವಳಿ ಹಿನ್ನೆಲೆಯಲ್ಲಿ ಕೆ ಎಸ್ ಆರ್ ಟಿ ಸಿ ವತಿಯಿಂದ ವಿಶೇಷ ಪ್ಯಾಕೇಜ್ ಟೂರ್ ಘೋಷಣೆ ಮಾಡಲಾಗಿದೆ. ಕೆ ಎಸ್ ಆರ್ ಟಿ ಸಿ ಮಂಗಳೂರು ವಿಭಾಗದಿಂದ ಈ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಾಲಯಗಳಿಗೆ ಸಂಪರ್ಕ ಕಲ್ಪಿಸುವ ಪ್ಯಾಕೇಜ್ ಟೂರ್ ಇದಾಗಿದೆ. ಕೆ ಎಸ್ ಆರ್ ಟಿ ಸಿ ಪ್ಯಾಕೇಜ್ ಟೂರ್ ಅಡಿಯಲ್ಲಿ 10 ಬಸ್ ಗಳು ಕಾರ್ಯನಿರ್ವಹಿಸಲಿವೆ.
ದಸರಾ ಸಂದರ್ಭದಲ್ಲಿ ಮಂಗಳೂರು ದಸರಾ ದರ್ಶನ ಪ್ಯಾಕೇಜ್ ಟೂರ್ ಮಾಡಲಾಗಿತ್ತು. ಅದೇ ರೀತಿ ಈಗ ದೀಪಾವಳಿ ಹಿನ್ನೆಲೆಯಲ್ಲಿ ದೀಪಾವಳಿ ವಿಶೇಷ ಪ್ಯಾಕೇಜ್ ಟೂರ್ ಘೋಷಿಸಲಾಗಿದ್ದು, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ಬಂದರೆ ಹೆಚ್ಚಿನ ಬಸ್ ಸೌಲಭ್ಯ ಒದಗಿಸಲಾಗುವುದು ಎಂದು ಕೆ ಎಸ್ ಆರ್ ಟಿ ಸಿ ಚೇರ್ಮನ್ ಚಂದ್ರಪ್ಪ ತಿಳಿಸಿದ್ದಾರೆ.