alex Certify ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಬೆಸ್ಕಾಂ; ಇಲ್ಲಿದೆ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಬೆಸ್ಕಾಂ; ಇಲ್ಲಿದೆ ವಿವರ

ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ 400 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 2020, 2021, 2022 ಮತ್ತು 2019ರ ಅಕ್ಟೋಬರ್ ನಲ್ಲಿ ಪದವಿ ಪಾಸಾದ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಸ್ಟೈಫಂಡ್ ನೀಡಲಾಗುತ್ತಿದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 7 ಅಂತಿಮ ದಿನಾಂಕವಾಗಿದೆ.

ಉದ್ಯೋಗದ ಸ್ಥಳ ಬೆಂಗಳೂರು ಆಗಿದ್ದು ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 8000 – 9008 ರೂಪಾಯಿಗಳ ಸ್ಟೈಫಂಡ್ ನೀಡಲಾಗುತ್ತದೆ. ಮೆರಿಟ್ ಹಾಗೂ ಸಂದರ್ಶನ ಆಧರಿಸಿ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅಕ್ಟೋಬರ್ 15 ರಿಂದ ಆರಂಭವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ವಿದ್ಯುತ್ ನಿಗಮ ನಿಯಮಿತದ ಅಧಿಕೃತ ವೆಬ್ಸೈಟ್ bescom.org ಗೆ ಭೇಟಿ ನೀಡಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...