alex Certify BIG NEWS: ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ಬೆದರಿಕೆ ಪ್ರಕರಣ; CID ತನಿಖೆಗೆ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ಬೆದರಿಕೆ ಪ್ರಕರಣ; CID ತನಿಖೆಗೆ ಆದೇಶ

ಮಂಗಳೂರು: ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರಿಗೆ ಬೆದರಿಕೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿ ಆದೇಶ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರನ್ನು ಸ್ಕಾರ್ಪಿಯೋ ವಾಹನದಲ್ಲಿ ಬಂದ ದುಷ್ಕರ್ಮಿಗಳು ಅಡ್ಡಗಟ್ಟಿ ತಲ್ವಾರ್ ಝಳಪಿಸಿ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಕಾರಿನ ಗಾಜುಗಳನ್ನು ಜಖಂ ಗೊಳಿಸಿದ್ದರು. ಈ ಬಗ್ಗೆ ಶಾಸಕ ಹರೀಶ್ ಪೂಂಜಾ ಕಾರು ಚಾಲಕ ನವೀನ್ ಪೊಲೀಸರಿಗೆ ದೂರು ನೀಡಿದ್ದರು.

ತನಿಖೆ ನಡೆಸಿದ್ದ ಪೊಲೀಸರು ಆರೋಪಿ ರಿಯಾಜ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಇದು ಯಾವುದೇ ಕೊಲೆ ಯತ್ನ ಪ್ರಕರಣವಲ್ಲ, ಕಾರನ್ನು ಓವರ್ ಟೇಕ್ ಮಾಡುವ ಭರದಲ್ಲಿ ನಡೆದ ಘಟನೆ. ಸ್ಕಾರ್ಪಿಯೋ ಕಾರಿನಲ್ಲಿದ್ದ ರಿಯಾಜ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ ಆತನ ಬಳಿ ಯಾವುದೇ ಆಯುಧ ಪತ್ತೆಯಾಗಿಲ್ಲ. ಈ ಹಿಂದೆ ಆತನ ವಿರುದ್ಧ ಯಾವುದೇ ಪ್ರಕರಣ ಕೂಡ ದಾಖಲಾಗಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲೆ ಪೊಲಿಸ್ ವರಿಷ್ಠಾಧಿಕಾರಿ ಋಷಿಕೇಶ್ ತಿಳಿಸಿದ್ದರು.

ಆದರೆ ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದ ಶಾಸಕರು ಇದರ ಹಿಂದೆ ಜಿಹಾದಿ ಕೈವಾಡವಿರುವ ಸಾಧ್ಯತೆ ಇದೆ. ನಾನು ಹಿಂದುತ್ವದ ಪರವಾಗಿ ಕೆಲಸ ಮಾಡುವ ಶಾಸಕ. ನನ್ನ ಮೇಲೆ ಜಿಹಾದಿ ಶಕ್ತಿಗಳು ಹಗೆ ಸಾಧಿಸುವ ಸಾಧ್ಯತೆ ಇದೆ. ನಾನು ಹೆದರಲ್ಲ ಎಂದು ಹೇಳಿದ್ದರು. ಇದೀಗ ಪ್ರಕರಣವನ್ನು ರಾಜ್ಯ ಸರ್ಕಾರ ಅಪರಾಧ ತನಿಖಾ ದಳ (ಸಿಐಡಿ) ತನಿಖೆಗೆ ವಹಿಸಿ ಆದೇಶ ಹೊರಡಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...