ನವದೆಹಲಿ: ಪಾಕಿಸ್ತಾನದಲ್ಲಿ ಕುಳಿತು ಕಾಶ್ಮೀರದಲ್ಲಿ ದುಷ್ಕೃತ್ಯಕ್ಕೆ ಸಂಚು ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಇಎಂ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.
ಮಸೂದ್ ಅಜರ್ ಸೇರಿದಂತೆ 12 ಉಗ್ರರ ವಿರುದ್ಧ ಎನ್ಐಎ ಚಾರ್ಜ್ ಶೀಟ್ ಸಲ್ಲಿಸಿದೆ. ಕಾಶ್ಮೀರದಲ್ಲಿ ಭಯೋತ್ಪಾದನಾ ಕೃತ್ಯಗಳಿಗೆ ಸಂಚು, ಕುಮ್ಮಕ್ಕು, ಗಡಿಯೊಳಗೆ ಉಗ್ರರು ನುಸುಳಲು ಪ್ರಚೋದನೆ ನೀಡಿದ್ದಾಗಿ ಆರೋಪಿಸಲಾಗಿದೆ.
ಜಮ್ಮುವಿನಲ್ಲಿ ನಡೆದ ಸುಂಜ್ವಾನ್ ಉಗ್ರರ ದಾಳಿಗೆ ಸಂಬಂಧಿಸಿದಂತೆ 12 ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ ಬುಧವಾರ ಚಾರ್ಜ್ ಶೀಟ್ ಸಲ್ಲಿಸಿದೆ.
ಕಾಶ್ಮೀರ ಮೂಲದ ಭಯೋತ್ಪಾದಕರು, ಪಾಕಿಸ್ತಾನ ಮೂಲದ ನಾಯಕತ್ವ/ಹ್ಯಾಂಡ್ಲರ್‌ಗಳು ಮತ್ತು ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಇಯ ಭಯೋತ್ಪಾದಕರ ನಡುವೆ ಸಂಚು ರೂಪಿಸಿದ ಎನ್‌ಐಎ ಪ್ರಕರಣದಲ್ಲಿ 12 ಆರೋಪಿಗಳ ವಿರುದ್ಧ ಜಮ್ಮುವಿನ ಎನ್‌ಐಎ ವಿಶೇಷ ನ್ಯಾಯಾಲಯದಲ್ಲಿ ಏಜೆನ್ಸಿ ಚಾರ್ಜ್ ಶೀಟ್ ಸಲ್ಲಿಸಿದೆ.