ರಾಜ್ಯದಾದ್ಯಂತ ಅಕಾಲಿಕ ಮಳೆ ಸುರಿಯುತ್ತಿದ್ದು, ಇದರಿಂದ ಜನತೆ ತತ್ತರಿಸಿ ಹೋಗಿದ್ದಾರೆ. ಹಲವಡೆ ಮನೆಗಳಿಗೆ ನೀರು ನುಗ್ಗಿದ್ದರೆ ಇನ್ನು ಜಮೀನುಗಳೂ ಸಹ ನೀರಿನಿಂದ ಆವೃತವಾಗಿ ಸಾವಿರಾರು ಎಕರೆಯಲ್ಲಿ ಬೆಳೆದಿದ್ದ ಬೆಳೆ ನಷ್ಟವಾಗಿದೆ.
ಇದರ ಮಧ್ಯೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ತಿಳಿಸಿದೆ. ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಭಾರಿ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.