ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ ಗಳಲ್ಲಿರುವವರಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ಒಂದನ್ನು ನೀಡಲು ಮುಂದಾಗಿದೆ. ಆಹಾರ ತಯಾರಿಕೆಗೆ ಸಿರಿಧಾನ್ಯ ನೀಡಲು ಚಿಂತನೆ ನಡೆಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ಬುಧವಾರದಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗಬೇಕು ಎಂಬ ಕಾರಣಕ್ಕಾಗಿ ಈ ಚಿಂತನೆ ನಡೆಸಲಾಗಿದೆ. ಅಲ್ಲದೆ ಇದರಿಂದ ಸಿರಿಧಾನ್ಯ ಬೆಳೆಯುವ ರೈತರಿಗೂ ಉತ್ತಮ ಅವಕಾಶ ಸಿಗಲಿದೆ ಎಂದರು.
2023 ಅನ್ನು ಅಂತರಾಷ್ಟ್ರೀಯ ಸಿರಿಧಾನ್ಯ ವರ್ಷ ಎಂದು ವಿಶ್ವ ಸಂಸ್ಥೆ ಘೋಷಿಸಿದ್ದು, ಈ ಹಿನ್ನೆಲೆಯಲ್ಲಿ 2023 ರ ಜನವರಿ 20 ರಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ಸಿರಿಧಾನ್ಯ ಮೇಳವನ್ನು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ತಿಳಿಸಿದರು.